1. ತರಬೇತಿ ಅವಧಿಯು ಒಟ್ಟು 4 ತಿಂಗಳುಗಳದ್ದಾಗಿದ್ದು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿರುತ್ತದೆ. |
---|
2. ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಈ ಅವಧಿಯಲ್ಲಿ ಉಚಿತ ವಸತಿ ಮತ್ತು ಊಟದ ಸೌಲಭ್ಯವನ್ನು ನೀಡಲಾಗುವುದು. |
3. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 4 ತಿಂಗಳುಗಳ ತರಬೇತಿ ಅವಧಿಯಲ್ಲಿ ದೈಹಿಕ ಸಹಿಷ್ಣುತೆ (physical test) ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಪಟ್ಟಂತೆ ತರಬೇತಿ ನೀಡಲಾಗುವುದು. |
4.ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಂದು ಜೊತೆ ಟ್ರ್ಯಾಕ್ ಸೂಟ್, ದೈಹಿಕ ತರಬೇತಿಗೆ ಅಗತ್ಯವಾದ ಒಂದು ಜೊತೆ ಸಮವಸ್ತ್ರ ಹಾಗೂ ಒಂದು ಜೊತೆ ಶೂ ಗಳನ್ನು ಉಚಿತವಾಗಿ ವಿತರಿಸಲಾಗುವುದು. |
5.ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ, ಶಿಷ್ಯವೇತನ ಅಥವಾ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ. |
6. ತರಬೇತಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಉಪಕರಣವನ್ನು ಅಳವಡಿಸಿಕೊಂಡು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳ ಹಾಜರಾತಿಯನ್ನು ನಿರ್ವಹಿಸಲಾಗುವುದು. |
7 .ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶೇ.80 ರಷ್ಟು ಹಾಜರಾತಿಯು ಕಡ್ಡಾಯವಾಗಿರುತ್ತದೆ. |
8.ತರಬೇತಿಯನ್ನು ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. |